- Advertisement -
- Advertisement -
ಮಂಗಳೂರು: ಪೋಕ್ಸೋ ಹಾಗೂ ಬಿಎನ್ಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ವಾಸ ಹಾಗೂ ₹80,000 ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಶಿಕ್ಷೆಗೊಳಗಾದ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂದಿನ ಪೊಲೀಸ್ ನಿರೀಕ್ಷಕರಾದ ಅನಂತ ಪದ್ಮನಾಭರವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಶ್ರೀ ಮಾನು ಕೆ.ಎಸ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19, 2026ರಂದು ಈ ಮಹತ್ವದ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಪರವಾಗಿ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.
- Advertisement -


