Sunday, September 20, 2026
Homeಕರಾವಳಿಮಂಗಳೂರುಬೆಳ್ತಂಗಡಿ : ವೇಣೂರು ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ -ಮೂವರ ವಿರುದ್ಧ ಪ್ರಕರಣ

ಬೆಳ್ತಂಗಡಿ : ವೇಣೂರು ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ -ಮೂವರ ವಿರುದ್ಧ ಪ್ರಕರಣ

- Advertisement -
- Advertisement -

ಬೆಳ್ತಂಗಡಿ: ನಿಟ್ಟಡೆ ಗ್ರಾಮದ ಕಾಜೋಡಿ ಹೊಳೆಯಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಮೂವರ ವಿರುದ್ಧ ವೇಣೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವೇಣೂರು ಠಾಣಾ ಪಿಎಸ್‌ಐ ಅಕ್ಷಯ್ ಡವಗಿ ಅವರು ಸಿಬ್ಬಂದಿಗಳಾದ ಹೆಚ್‌ಸಿ ನಾಗರಾಜಪ್ಪ ಹಾಗೂ ಪಿಸಿ ವಸಂತ ಅವರೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 19ರಂದು ರೌಂಡ್ಸ್ ಕರ್ತವ್ಯದಲ್ಲಿದ್ದರು. ಈ ವೇಳೆ ನಿಟ್ಟಡೆ ಗ್ರಾಮದ ಕಾಜೋಡಿ ಹೊಳೆಯಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು.ಮಾಹಿತಿ ಆಧರಿಸಿ ಪೊಲೀಸರು 4.40 ರ ಸುಮಾರಿಗೆ ಸ್ಥಳಕ್ಕೆ ತೆರಳಿದಾಗ, ಮೂವರು ವ್ಯಕ್ತಿಗಳು ಹೊಳೆಯಲ್ಲಿ ಮರಳು ತೆಗೆಯುತ್ತಿರುವುದು ಪತ್ತೆಯಾಗಿದೆ. ಮರಳು ತೆಗೆಯಲು ಸಂಬಂಧಪಟ್ಟ ಇಲಾಖೆಯಿಂದ ಪರವಾನಿಗೆ ಇದೆಯೇ ಎಂದು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದಿರುವುದು ಬೆಳಕಿಗೆ ಬಂದಿದೆ.ಆರೋಪಿಗಳನ್ನು ನಿಟ್ಟಡೆ ಗ್ರಾಮದ ಹರೀಶ್ ಪಿ.ಎಸ್. (40), ರಾಜೇಶ್ (25) ಹಾಗೂ ಅಶ್ವತ್ (20) ಎಂದು ಗುರುತಿಸಲಾಗಿದೆ.

ಸ್ಥಳ ಪರಿಶೀಲನೆ ನಡೆಸಿದಾಗ ಹೊಳೆ ಬದಿಯಲ್ಲಿ ಸುಮಾರು 2 ಯೂನಿಟ್ ಮರಳನ್ನು ರಾಶಿ ಹಾಕಿರುವುದು ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ಸುಮಾರು 8 ಸಾವಿರ ರೂ. ಎಂದು ತಿಳಿದುಬಂದಿದೆ.ಅಕ್ರಮ ಮರಳುಗಾರಿಕೆಗೆ ಬಳಸಿದ್ದ ಒಂದು ಹಾರೆ, ಎರಡು ಪ್ಲಾಸ್ಟಿಕ್ ಬುಟ್ಟಿಗಳು, ಎರಡು ಕಬ್ಬಿಣದ ಬಕೆಟ್‌ಗಳು ಹಾಗೂ ಒಂದು ಕಬ್ಬಿಣದ ಸ್ಟ್ಯಾಂಡ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸರಕಾರದ ರಾಜಸ್ವಕ್ಕೆ ನಷ್ಟ ಉಂಟುಮಾಡಿ ಅಕ್ರಮವಾಗಿ ಮರಳುಗಾರಿಕೆ ನಡೆಸಿದ ಆರೋಪದಡಿ ವೇಣೂರು ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳ ವಿರುದ್ಧ BNS ಕಲಂ 303(2), Karnataka Minor Mineral Concession Rules 1994ರ ಕಲಂ 42, 43, 44 ಹಾಗೂ MMRD Act 1957ರ ಕಲಂ 4(1), 4(1A), 21(1), 21(1A) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!