- Advertisement -
- Advertisement -
ಕಾರ್ಕಳ : ಮಾಜಿ ಸಚಿವ ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ರಸ್ತೆ ಅಪಘಾತಕ್ಕೀಡಾದ ಘಟನೆ ಕಾರ್ಕಳ-ಮೂಡುಬಿದಿರೆ ಹೆದ್ದಾರಿಯಲ್ಲಿ ಸಂಭವಿಸಿದೆ. ಖಾಸಗಿ ಬಸ್ ಒಂದಕ್ಕೆ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಮಾಜಿ ಸಚಿವ ರಮಾನಾಥ್ ರೈ ಅವರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಇನ್ನು ಕೆಲವರಿಗೂ ಗಾಯಗಳಾಗಿದ್ದು, ಅವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ನಿರೀಕ್ಷಿಸಲಾಗುತ್ತಿದ್ದು, ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -


