Monday, September 21, 2026
Homeಕರಾವಳಿಸೌಜನ್ಯ ಅತ್ಯಾಚಾರ ಪ್ರಕರಣದ ಮರುತನಿಖೆ ಸ್ವಾಗತರ್ಹ : ಸುಪ್ರೀಂ ಕೋರ್ಟ್ ಆದೇಶಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ...

ಸೌಜನ್ಯ ಅತ್ಯಾಚಾರ ಪ್ರಕರಣದ ಮರುತನಿಖೆ ಸ್ವಾಗತರ್ಹ : ಸುಪ್ರೀಂ ಕೋರ್ಟ್ ಆದೇಶಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಬದ್ಧವಾಗಿದೆ

- Advertisement -
- Advertisement -

ಧರ್ಮಸ್ಥಳ: ಕುಮಾರಿ ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ಮಾನ್ಯ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಶ್ರೀ ಕ್ಷೇತ್ರ ಧರ್ಮಸ್ಥಳವು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಾಲಯ ಕಚೇರಿಯ ವ್ಯವಸ್ಥಾಪಕರಾದ ಕೆ ಪಾರ್ಶ್ವನಾಥ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಶ್ರೀ ಕ್ಷೇತ್ರದ ವಿರುದ್ಧ ಕೆಲ ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕ್ಷೇತ್ರಕ್ಕೆ ಕಳಂಕ ತರುವ ಪ್ರಯತ್ನಗಳನ್ನು ಮಾಡುತ್ತಿವೆ. ಕುಮಾರಿ ಸೌಜನ್ಯ ಅವರಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರ ಧರ್ಮಸ್ಥಳದ ದೃಢವಾದ ಆಶಯವಾಗಿದೆ. ಪ್ರಸ್ತುತ ಆದೇಶಿಸಲಾಗಿರುವ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಯಬೇಕು. ತನಿಖೆಯ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಆಶಿಸುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

- Advertisement -

Latest News

error: Content is protected !!