Sunday, July 6, 2025
Homeಪ್ರಮುಖ-ಸುದ್ದಿರಾಮಮಂದಿರ ಭೂಮಿ ಪೂಜೆಯಲ್ಲಿ ಭಾಗಿಯಾಗಿದ್ದ ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ, ಹೆಚ್ಚಿದ ಆತಂಕ

ರಾಮಮಂದಿರ ಭೂಮಿ ಪೂಜೆಯಲ್ಲಿ ಭಾಗಿಯಾಗಿದ್ದ ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ, ಹೆಚ್ಚಿದ ಆತಂಕ

spot_img
- Advertisement -
- Advertisement -

ನವದೆಹಲಿ: ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಾಗಿರುವ ಮಹಂತ್ ನೃತ್ಯ ಗೋಪಾಲ್ ದಾಲ್ ಅವರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿ ತಿಳಿಸಿವೆ.

ಕೋಟ್ಯಾಂತರ ಭಾರತೀಯರ ಕನಸ್ಸಾಗಿದ್ದ ಅಯೋಧ್ಯೆ ರಾಮಮಂದಿರದ ಭೂಮಿ ಪೂಜೆ ಆಗಸ್ಟ್ 5 ರಂದು ನೆರವೇರಿಸಲಾಗಿತ್ತು. ಕಾರ್ಯಕ್ರಮದಲ್ಲಿ ಐವರು ಪ್ರಮುಖ ನಾಯಕರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಐವರಲ್ಲಿ ಮಹಂತ್ ನೃತ್ಯ ಗೋಪಾಲ್ ದಾಸ್ ಕೂಡ ಒಬ್ಬರಾಗಿದ್ದರು.

ಕಾರ್ಯಕ್ರಮದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿ ಬೆನ್ ಪಟೇಲ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಪ್ರಧಾನಿ ಮೋದಿಯವರು ಭಾಗಿಯಾಗಿದ್ದರು. ಇದೀಗ ಮಹಂತ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಈ ನಡುವೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ತ್ವರಿಗತಿ ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!