ಕಡಬ: ರಾಮಕುಂಜ ಗ್ರಾಮದ ಕಾಜರುಕ್ಕು ನಿವಾಸಿಕರ್ನಾಟಕ ಗೋಡಂಬಿ ಅಭಿವೃದ್ಧಿ ನಿಗಮದಲ್ಲಿ (KCDC)ಹೊರ ಗುತ್ತಿಗೆ ಆಧಾರದಲ್ಲಿ ಫಾರೆಸ್ಟ್ ವಾಚರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಚಿನ್ (33) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಧ್ಯಾಹ್ನ ಊಟ ಮಾಡಿ ಸಚಿನ್ ವಿಶ್ರಾಂತಿ ಪಡೆಯುತ್ತಿದ್ದಾಗ ಹೃದಯಾಘಾತವಾಗಿದೆ ಎನ್ನಲಾಗಿದೆ.
ಸೆ.22 ರಂದು ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಸಚಿನ್ ಅವರನ್ನು ಮಧ್ಯಾಹ್ನ 3 ಗಂಟೆ ಸುಮಾರಿಗೆ ತಾಯಿ ಎಬ್ಬಿಸಲು ತೆರಳಿದಾಗ, ಅವರು ಜೋರಾಗಿ ಉಸಿರಾಡುತ್ತಿರುವುದು ಕಂಡುಬಂದಿದೆ. ತಕ್ಷಣವೇ ಸೋದರ ಚರಣ್ ಅವರ ನೆರವಿನೊಂದಿಗೆ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತಾದರೂ, ಪರಿಶೀಲಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಮೃತ ಸಚಿನ್ ಕಳೆದ ಒಂದೂವರೆ ವರ್ಷದಿಂದ ಕೆಸಿಡಿಸಿ ಮಂಗಳೂರು ವಿಭಾಗದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಅರಣ್ಯ ವೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮೊದಲು ಅವರು ಕಾಜರುಕ್ಕುವಿನಲ್ಲಿ ಬೈಕ್ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದರು.


