Friday, September 25, 2026
Homeಕರಾವಳಿಮಂಗಳೂರುಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್‌ ಆರೋಪ: 9 ಮಂದಿ ವಿರುದ್ಧ ಎಫ್‌ಐಆರ್

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್‌ ಆರೋಪ: 9 ಮಂದಿ ವಿರುದ್ಧ ಎಫ್‌ಐಆರ್

- Advertisement -
- Advertisement -

ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಬಿಬಿಎ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ಭೀಕರವಾಗಿ ರ‍್ಯಾಗಿಂಗ್‌ ನಡೆಸಿ, ಕೊಲೆ ಬೆದರಿಕೆಯೊಡ್ಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಪ್ರಥಮ ವರ್ಷದ ವಿದ್ಯಾರ್ಥಿ ನೀಡಿದ ದೂರಿನನ್ವಯ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸೆಪ್ಟೆಂಬರ್ 19 ರಂದು ಕಾಲೇಜು ಹೊರಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಜೂನಿಯರ್ ವಿದ್ಯಾರ್ಥಿಗಳನ್ನು ಬೈಕ್‌ನಲ್ಲಿ ಅಪಹರಿಸಿದ ಆರೋಪಿಗಳು, ನಿರ್ಜನ ಮನೆಯೊಂದರ ಕೊಠಡಿಯಲ್ಲಿ ಕೂಡಿಹಾಕಿದ್ದಾರೆ. ಬಳಿಕ ವಿದ್ಯಾರ್ಥಿಗಳ ಬಟ್ಟೆ ಬಿಚ್ಚಿಸಿ, ಬಾಯಿಗೆ ಬಟ್ಟೆ ತುರುಕಿ ಬೆಲ್ಟ್, ಹ್ಯಾಂಗರ್‌ ಹಾಗೂ ಅಪಾಯಕಾರಿ ‘ಕಬ್ಬಿಣದ ಪಂಚ್’ ನಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಈ ಅಮಾನುಷ ಕೃತ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.

ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ತೀವ್ರ ಭಯಭೀತರಾದ ವಿದ್ಯಾರ್ಥಿಗಳು ಊರಿಗೆ ತೆರಳಿ ಪೋಷಕರಿಗೆ ವಿಷಯ ತಿಳಿಸಿದ್ದರು. ಕುಟುಂಬಸ್ಥರ ಧೈರ್ಯದ ಮೇರೆಗೆ ಮಂಗಳೂರಿಗೆ ಮರಳಿ ದೂರು ನೀಡಿದ್ದಾರೆ.

ಸಂತ್ರಸ್ತರ ದೂರಿನಂತೆ ನಾಸೀದ್ ಅಮೀರ್, ಆದಿಲ್ ಎಂ, ಅರ್ಶಕ್, ಅನೀಶ್, ಉವೈಸ್, ರೋಹನ್ ರಮೇಶ್, ಆದಿಲ್ ವಿ.ಪಿ, ರೆಹಾನ್ ಎಂ.ಪಿ ಹಾಗೂ ಶಿನಾಸ್ ಎಂಬ 9 ಮಂದಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.

- Advertisement -

Latest News

error: Content is protected !!