Friday, September 25, 2026
Homeಕರಾವಳಿರಾಜ್ಯ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ಪ್ರತಿಭಟನೆ

- Advertisement -
- Advertisement -

ಮಂಗಳೂರು: ರಾಜ್ಯದ ಆರ್ಥಿಕ ಇಲಾಖೆಯ ಎಚ್ಚರಿಕೆಯನ್ನು ಕಡೆಗಣಿಸಿ, ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬೇಕಾಬಿಟ್ಟಿಯಾಗಿ ಅನುದಾನ ಘೋಷಿಸಿದ್ದಾರೆ ಎಂದು ಆರೋಪಿಸಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಕಾರ್ಯಕರ್ತರು ಕೈಯಲ್ಲಿ ಚೊಂಬು ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಗೆ ಘೋಷಿಸಲಾದ ಅನುದಾನಗಳ ಕುರಿತು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜಿಲ್ಲೆಯ ಜನರಿಗೆ ನಿರೀಕ್ಷಿತ ಅನುದಾನ ದೊರೆತಿಲ್ಲ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು, ಮಾಜಿ ಸದಸ್ಯರಾದ ಬಾಲಕೃಷ್ಣ ಭಟ್ ಹಾಗೂ ಮೋನಪ್ಪ ಭಂಡಾರಿ ಸೇರಿದಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಮತ್ತು ಯತೀಶ್ ಆರ್ವಾರ್, ಮುಖಂಡರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಕವಿತಾ ಸನಿಲ್, ಸುಧೀರ್ ಶೆಟ್ಟಿ ಕಣ್ಣೂರು, ಜಯಾನಂದ ಅಂಚನ್, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ವಿವಿಧ ಮಂಡಳಿಗಳು ಹಾಗೂ ಮೋರ್ಚಾಗಳ ಪದಾಧಿಕಾರಿಗಳು, ಮನಪಾ ಮಾಜಿ ಸದಸ್ಯರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

- Advertisement -

Latest News

error: Content is protected !!