ಬಂಟ್ವಾಳ: ಕರಾವಳಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಬಂಟ್ವಾಳದ ಕೊಳತ್ತಮಜಲು ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಆರ್‌ಎಸ್‌ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಪೊಲೀಸರು ವಿಚಾರಣೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣ ನಡೆದು 1.5 ವರ್ಷಗಳ ಬಳಿಕ ಕೈಗೊಂಡಿರುವ ಈ ಕ್ರಮಕ್ಕೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

2025 ರ ಮೇ 27 ರಂದು ಕೊಳತ್ತಮಜಲು ಇರಾಕೋಡಿಯಲ್ಲಿ ಅಬ್ದುಲ್ ರಹಿಮಾನ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಈ ಕೃತ್ಯ ಎಸಗಲಾಗಿತ್ತು ಎನ್ನಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 15 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ಕೆಲವು ಸತ್ಯಾಂಶ ಹಾಗೂ ಸನ್ನಿವೇಶಗಳನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ನೋಟಿಸ್ ನೀಡಿದ್ದು, ಸೆಪ್ಟೆಂಬರ್ 26 ರಂದು ಕಲ್ಲಡ್ಕದ ತಮ್ಮ ನಿವಾಸದಲ್ಲಿ ವಿಚಾರಣೆಗೆ ಲಭ್ಯವಿರುವಂತೆ ಸೂಚಿಸಿದ್ದಾರೆ.


