Sunday, September 27, 2026
Homeಕರಾವಳಿಪಕ್ಷಪಾತ ಧೋರಣೆ ಖಂಡಿಸಿ ಸೆ.28ರಂದು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನಾ ಮೆರವಣಿಗೆ : ಪದ್ಮರಾಜ್ ಆರ್....

ಪಕ್ಷಪಾತ ಧೋರಣೆ ಖಂಡಿಸಿ ಸೆ.28ರಂದು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನಾ ಮೆರವಣಿಗೆ : ಪದ್ಮರಾಜ್ ಆರ್. ಪೂಜಾರಿ

- Advertisement -
- Advertisement -

ಮಂಗಳೂರು: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪಕ್ಷಪಾತ ಧೋರಣೆ ಖಂಡಿಸಿ ಸೆ. 28ರಂದು ಬೆಳಗ್ಗೆ 10.30ಕ್ಕೆ ಪಂಪ್‌ವೆಲ್ ಜಂಕ್ಷನ್‌ನಿಂದ ಪಡೀಲ್ ಪ್ರಜಾಸೌಧದವರೆಗೆ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಾರ್ಹವಾಗಿದ್ದು, ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಹಾರಾಷ್ಟ್ರ ಹಾಗೂ ಕರ್ನಾಟಕದ ಮಹಾದೇವಪುರ ಕ್ಷೇತ್ರದಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಅಕ್ರಮಗಳು ಚುನಾವಣಾ ವ್ಯವಸ್ಥೆಯ ಮೇಲಿನ ಅನುಮಾನಕ್ಕೆ ಕಾರಣವಾಗಿವೆ ಎಂದು ಅವರು ಹೇಳಿದರು. ಪ್ರತಿಭಟನೆಯಲ್ಲಿ ಸಚಿವರು, ಶಾಸಕರು, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ತುಳುವಿಗೆ ಎರಡನೇ ಭಾಷೆಯ ಸ್ಥಾನಮಾನ ನೀಡಿರುವುದನ್ನು ಉಲ್ಲೇಖಿಸಿದ ಅವರು, ಮಾಜಿ ಸಂಸದ ಪ್ರತಾಪ್‌ಸಿಂಹ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ, ಅವರು ತುಳುನಾಡಿನ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಕರಾವಳಿ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ₹16,000 ಕೋಟಿಗೂ ಅಧಿಕ ಮೊತ್ತದ ಯೋಜನೆಗಳನ್ನು ಘೋಷಿಸಿದೆ ಎಂದೂ ಅವರು ತಿಳಿಸಿದರು.

- Advertisement -

Latest News

error: Content is protected !!