Sunday, September 27, 2026
Homeಕರಾವಳಿಮಂಗಳೂರುಉಪ್ಪಿನಂಗಡಿ: ಬೈಕ್-ಟ್ಯಾಂಕರ್ ಲಾರಿ ಭೀಕರ ಢಿಕ್ಕಿ: ಬೈಕ್ ಸವಾರ ದುರ್ಮರಣ

ಉಪ್ಪಿನಂಗಡಿ: ಬೈಕ್-ಟ್ಯಾಂಕರ್ ಲಾರಿ ಭೀಕರ ಢಿಕ್ಕಿ: ಬೈಕ್ ಸವಾರ ದುರ್ಮರಣ

- Advertisement -
- Advertisement -

ಉಪ್ಪಿನಂಗಡಿ: ಬೈಕ್ ಹಾಗೂ ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಸೆಪ್ಟೆಂಬರ್ 25ರ ರಾತ್ರಿ ನಡೆದಿದೆ.ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮದ ಕಜೆ ನಿವಾಸಿ, ಗಾರೆ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಅಣ್ಣು (52) ಮೃತಪಟ್ಟ ದುರ್ದೈವಿ.

ಕೋಡಿಂಬಾಡಿಯ ತಮ್ಮ ಮನೆಯಿಂದ ಗೋಳಿತ್ತೊಟ್ಟಿನಲ್ಲಿ ನಿಧನರಾಗಿದ್ದ ಸಂಬಂಧಿಕರೊಬ್ಬರ ಮನೆಗೆ ತೆರಳಿ, ವಾಪಸ್ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಬೈಕ್ ನೀರಕಟ್ಟೆ ಬಳಿ ತಲುಪುತ್ತಿದ್ದಂತೆ, ಮಂಗಳೂರಿನಿಂದ ಹಾಸನ ಕಡೆಗೆ ಚಲಿಸುತ್ತಿದ್ದ ಟ್ಯಾಂಕರ್ ಲಾರಿಯ ಮಡ್ ಗಾರ್ಡಿಗೆ ಢಿಕ್ಕಿಯಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಅಣ್ಣು ಅವರು ರಸ್ತೆಗೆ ಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಟ್ಯಾಂಕರ್ ಚಾಲಕ ಮಲ್ಲಪ್ಪ ಸಂಕೋನಟ್ಟಿ ನೀಡಿದ ದೂರಿನನ್ವಯ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!