Sunday, September 27, 2026
Homeಕರಾವಳಿಮಂಗಳೂರುಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ: ₹24 ಲಕ್ಷ ಮೌಲ್ಯದ MDMA ವಶ, 16 ಪ್ರಕರಣಗಳ ಆರೋಪಿ...

ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ: ₹24 ಲಕ್ಷ ಮೌಲ್ಯದ MDMA ವಶ, 16 ಪ್ರಕರಣಗಳ ಆರೋಪಿ ಸೇರಿ ಮೂವರ ಬಂಧನ

- Advertisement -
- Advertisement -

ಮಂಗಳೂರು: ಬೆಂಗಳೂರಿನಿಂದ ಎಂಡಿಎಂಎ (MDMA) ಮಾದಕವಸ್ತುವನ್ನು ತಂದು ಮಂಗಳೂರು ನಗರದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 24 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಳ್ಳಲಾಗಿದೆ.ಉಳ್ಳಾಲ ತಾಲೂಕಿನ ಮುಡಿಪುವಿನ ನವಾಜ್ ಅಲಿಯಾಸ್ ನವ್ವಾ (35), ಮೊಹಮ್ಮದ್ ಆರೀಫ್ ಎನ್. (36) ಹಾಗೂ ಲಾಯ್ಡ್ ಡಿಸೊಜಾ (35) ಬಂಧಿತ ಆರೋಪಿಗಳು.

ಬೆಂಗಳೂರಿನಿಂದ ಮಾದಕವಸ್ತು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಸೆಪ್ಟೆಂಬರ್ 26ರಂದು ಸಂಜೆ ಉಳ್ಳಾಲ ತಾಲೂಕಿನ ಮುಡಿಪು ಕಾಯರ್ಗೋಳಿ ಕ್ರಾಸ್ ಬಳಿ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ 24 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಎಂಡಿಎಂಎ, 4 ಮೊಬೈಲ್ ಫೋನ್‌ಗಳು ಹಾಗೂ ಮಾದಕವಸ್ತು ಸಾಗಾಟಕ್ಕೆ ಬಳಸಿದ್ದ ಟೆಂಪೋ ವಾಹನವನ್ನು ಜಪ್ತಿ ಮಾಡಲಾಗಿದೆ. ವಶಪಡಿಸಿಕೊಂಡ ಒಟ್ಟು ಸ್ವತ್ತುಗಳ ಮೌಲ್ಯ 29.80 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

16 ಪ್ರಕರಣಗಳ ರೌಡಿಶೀಟರ್ ಬಂಧನ: ಬಂಧಿತ ಆರೋಪಿಗಳ ಪೈಕಿ ನವಾಜ್ ಅಲಿಯಾಸ್ ಮುಡಿಪು ನವಾಜ್ ಎಂಬಾತನ ವಿರುದ್ಧ ಕೊಲೆ ಯತ್ನ, ಅಪಹರಣ, ಅತ್ಯಾಚಾರ, ಹಲ್ಲೆ, ವಂಚನೆ, ದನಗಳ್ಳತನ ಹಾಗೂ ಮಾದಕವಸ್ತು ಮಾರಾಟ ಸೇರಿದಂತೆ ಕೊಣಾಜೆ, ಉಳ್ಳಾಲ, ಮುಲ್ಕಿ ಮತ್ತು ಸುರತ್ಕಲ್ ಪೊಲೀಸ್ ಠಾಣೆಗಳಲ್ಲಿ ಒಟ್ಟು 16 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಕೊಣಾಜೆ ಮತ್ತು ಉಳ್ಳಾಲ ಠಾಣೆಗಳಲ್ಲಿ ಈಗಾಗಲೇ 4 ಪ್ರಕರಣಗಳು ದಾಖಲಾಗಿವೆ.

ಈ ಮಾದಕವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಸಿಸಿಬಿ ಪೊಲೀಸರು ಜಾಲ ಬೀಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!