Monday, September 28, 2026
Homeಕರಾವಳಿಉಡುಪಿಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಬೈಕ್‌ಗೆ ಢಿಕ್ಕಿ; ಬೈಕ್‌ ಸವಾರ ಪ್ರಾಣಾಪಾಯದಿಂದ ಪಾರು

ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಬೈಕ್‌ಗೆ ಢಿಕ್ಕಿ; ಬೈಕ್‌ ಸವಾರ ಪ್ರಾಣಾಪಾಯದಿಂದ ಪಾರು

- Advertisement -
- Advertisement -

ಉಡುಪಿ: ಕಾಪು ಪೆಟ್ರೋಲ್ ಬಂಕ್ ಸಮೀಪ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ಬಸ್‌, ಸರ್ವಿಸ್ ರಸ್ತೆಗೆ ಪ್ರವೇಶಿಸುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್‌ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಬೈಕ್‌ ಬಸ್‌ನಡಿಯಲ್ಲಿ ಸಿಲುಕಿಕೊಂಡಿದೆ.

ಅಪಘಾತ ಗಮನಿಸಿದ ಸ್ಥಳೀಯರು ತಕ್ಷಣ ಸವಾರನನ್ನು ರಕ್ಷಿಸಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!