Monday, September 28, 2026
Homeತಾಜಾ ಸುದ್ದಿಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತು ಮೂಗು ಕೊಯ್ದ ಪತಿ!

ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತು ಮೂಗು ಕೊಯ್ದ ಪತಿ!

- Advertisement -
- Advertisement -

ಉತ್ತರ ಪ್ರದೇಶ; : ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ಪತಿಯೊಬ್ಬ ಆಕೆಯ ಮೂಗನ್ನೇ ಕೊಯ್ದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.

ರಾಜೇಂದ್ರ ಎಂಬಾತನೇ ಈ ಕೃತ್ಯ ಎಸಗಿದ ಪತಿ. ಪತ್ನಿ ತನ್ನ ಪ್ರಿಯಕರ ಪ್ರದೀಪ್ ಜೊತೆ ಓಡಿಹೋಗಿದ್ದಳು ಎನ್ನಲಾಗಿದೆ. ಈ ವಿಷಯ ತಿಳಿದ ಪತಿ ರಾಜೇಂದ್ರ, ತಕ್ಷಣವೇ ಪತ್ನಿಯನ್ನು ಹುಡುಕಿ ಮನೆಗೆ ಕರೆತಂದಿದ್ದಾನೆ. ಬಳಿಕ ಆಕೆಯ ಎದೆಯ ಮೇಲೆ ಕುಳಿತು ಚಾಕುವಿನಿಂದ ಆಕೆಯ ಮೂಗನ್ನು ಕೊಯ್ದಿದ್ದಾನೆ.

ಘಟನೆಯಲ್ಲಿ ತೀವ್ರ ಗಾಯಗೊಂಡಿರುವ ಪತ್ನಿ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೃತ್ಯ ಎಸಗಿದ ಪತಿ ರಾಜೇಂದ್ರ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!