Wednesday, September 30, 2026
Homeಕರಾವಳಿಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪರಿಶೀಲನಾ ಸಮಿತಿ; ಸಮಿತಿ ರಚನೆಗೆ ವಕೀಲರ ಸಂಘ ಸ್ವಾಗತ

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪರಿಶೀಲನಾ ಸಮಿತಿ; ಸಮಿತಿ ರಚನೆಗೆ ವಕೀಲರ ಸಂಘ ಸ್ವಾಗತ

- Advertisement -
- Advertisement -

ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆ ಕುರಿತು ಪರಿಶೀಲಿಸಲು ಮೂವರು ನ್ಯಾಯಮೂರ್ತಿಗಳ ಸಮಿತಿ ರಚಿಸಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನಿರ್ಧಾರವನ್ನು ಮಂಗಳೂರು ವಕೀಲರ ಸಂಘ ಸ್ವಾಗತಿಸಿದೆ ಎಂದು ಸಂಘದ ಅಧ್ಯಕ್ಷ ಜಗದೀಶ್ ಕೆ. ಶೇಣವ ತಿಳಿಸಿದ್ದಾರೆ.

ಕರಾವಳಿ ಭಾಗದ ಜನರು ಹೈಕೋರ್ಟ್ ಸಂಬಂಧಿತ ನ್ಯಾಯಾಂಗ ಸೇವೆಗಳಿಗಾಗಿ ಬೆಂಗಳೂರಿಗೆ ತೆರಳಬೇಕಾಗಿರುವುದರಿಂದ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ನ್ಯಾಯದ ಲಭ್ಯತೆ ಮತ್ತಷ್ಟು ಸುಲಭವಾಗಲಿದೆ. ಇದರಿಂದ ಸಾರ್ವಜನಿಕರ ಸಮಯ ಹಾಗೂ ಆರ್ಥಿಕ ವೆಚ್ಚವೂ ಕಡಿಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಹಲವು ವರ್ಷಗಳಿಂದ ನಡೆಯುತ್ತಿರುವ ಪ್ರಯತ್ನಗಳ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ಈ ಅಧಿಸೂಚನೆ ಮಹತ್ವದ ಹೆಜ್ಜೆಯಾಗಿದೆ. ರಚಿಸಲಾದ ಸಮಿತಿಯು ಸಂಬಂಧಪಟ್ಟ ಎಲ್ಲ ಹಿತಾಸಕ್ತಿದಾರರೊಂದಿಗೆ ಸಮಾಲೋಚನೆ ನಡೆಸಿ, ಬಳಿಕ ತನ್ನ ವರದಿಯನ್ನು ಸಲ್ಲಿಸಲಿದೆ.

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘವು ಮುಂದೆಯೂ ಅಗತ್ಯ ಸಹಕಾರ ನೀಡುವುದರ ಜೊತೆಗೆ ರಚನಾತ್ಮಕ ಪ್ರಯತ್ನಗಳನ್ನು ಮುಂದುವರಿಸಲಿದೆ ಎಂದು ಜಗದೀಶ್ ಕೆ. ಶೇಣವ ತಿಳಿಸಿದ್ದಾರೆ.

- Advertisement -

Latest News

error: Content is protected !!