Wednesday, September 30, 2026
Homeಕರಾವಳಿಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಾಟದ ಲಾರಿ ತಡೆಯಿಡಿದ ಹಿಂದೂ ಸಂಘಟನೆಯ ಕಾರ್ಯಕರ್ತರು; 6ಕ್ಕೂ ಅಧಿಕ ದನಗಳ...

ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಾಟದ ಲಾರಿ ತಡೆಯಿಡಿದ ಹಿಂದೂ ಸಂಘಟನೆಯ ಕಾರ್ಯಕರ್ತರು; 6ಕ್ಕೂ ಅಧಿಕ ದನಗಳ ರಕ್ಷಣೆ

- Advertisement -
- Advertisement -

ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಬುಧವಾರ ಮುಂಜಾನೆ ನಡೆದಿದೆ. ಮಾಣಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ಫ್ಲೈಓವರ್ ಮೇಲೆ ತಡೆದು ಪರಿಶೀಲಿಸಿದಾಗ, ಲಾರಿಯಲ್ಲಿ ಆರಕ್ಕೂ ಅಧಿಕ ದನಗಳು ಪತ್ತೆಯಾಗಿವೆ ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ನಗರ ಠಾಣೆ ಪೊಲೀಸರು ದನಗಳನ್ನು ರಕ್ಷಿಸಿ, ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಲಾರಿಯಲ್ಲಿದ್ದ ಮೂವರು ವ್ಯಕ್ತಿಗಳು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ದನಗಳನ್ನು ಎಲ್ಲಿಂದ ತರಲಾಗಿತ್ತು ಹಾಗೂ ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣೆಯಲ್ಲಿ ಮುಂದಿನ ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!