Wednesday, September 30, 2026
Homeಅಪರಾಧಸೌಜನ್ಯ ಅತ್ಯಾಚಾರ-ಹತ್ಯೆ ಪ್ರಕರಣ; ವಿಶೇಷ ತನಿಖಾ ತಂಡದಿಂದ ಹೊರಗಿಡುವಂತೆ ಎಎಸ್ಪಿ ವೆಂಕಟೇಶ್ ಪ್ರಸನ್ನ ಸರ್ಕಾರಕ್ಕೆ ಮನವಿ

ಸೌಜನ್ಯ ಅತ್ಯಾಚಾರ-ಹತ್ಯೆ ಪ್ರಕರಣ; ವಿಶೇಷ ತನಿಖಾ ತಂಡದಿಂದ ಹೊರಗಿಡುವಂತೆ ಎಎಸ್ಪಿ ವೆಂಕಟೇಶ್ ಪ್ರಸನ್ನ ಸರ್ಕಾರಕ್ಕೆ ಮನವಿ

- Advertisement -
- Advertisement -

ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT)ದಿಂದ ತಮ್ಮನ್ನು ಕೈಬಿಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಸೌಜನ್ಯಾ ಕುಟುಂಬಸ್ಥರು ತಮ್ಮ ಮೇಲೆ ಅವಿಶ್ವಾಸ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ತನಿಖಾ ತಂಡದಲ್ಲಿ ಮುಂದುವರಿಯುವುದು ನೈತಿಕವಾಗಿ ಸೂಕ್ತವೇ ಎಂಬ ಪ್ರಶ್ನೆ ಎದುರಾಗಿದೆ. ಹೀಗಾಗಿ ತಮ್ಮನ್ನು ಎಸ್ಐಟಿಯಿಂದ ಕೈಬಿಡುವಂತೆ ವೆಂಕಟೇಶ್ ಪ್ರಸನ್ನ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 17 ವರ್ಷದ ಸೌಜನ್ಯಾ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದರು. ಪ್ರಕರಣವನ್ನು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಎಸ್ಐಟಿ ರಚಿಸಿ ಮೂರು ತಿಂಗಳೊಳಗೆ ಅನುಸರಣೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿ ನಿಶಾ ಜೇಮ್ಸ್, ಬೆಂಗಳೂರಿನ ಸಿಐಡಿ ಎಸ್ಪಿ ಲೋಕೇಶ್ ಜಗಲಾಸರ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಎಸ್ಪಿ ವೆಂಕಟೇಶ್ ಪ್ರಸನ್ನ ಅವರನ್ನು ಎಸ್ಐಟಿ ಸದಸ್ಯರನ್ನಾಗಿ ನೇಮಿಸಲಾಗಿತ್ತು.

- Advertisement -

Latest News

error: Content is protected !!