Wednesday, September 30, 2026
Homeಕರಾವಳಿಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ಪ್ರಕರಣ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ಪ್ರಕರಣ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ

- Advertisement -
- Advertisement -

ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟ ಹಾಗೂ ಬೆಂಕಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಅವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಮೃತರನ್ನು ಮುಲ್ಕಿ ಮೂಲದ 30 ವರ್ಷದ ಮನೀಶ್ ಕರ್ಕೇರಾ ಎಂದು ಗುರುತಿಸಲಾಗಿದೆ. ಅವಘಡ ಸಂಭವಿಸಿದ ಪ್ರದೇಶದಲ್ಲಿ ಮನೀಶ್ ಅವರು ಕಾಣೆಯಾಗಿದ್ದರು. ಅವರು ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಅವಘಡದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೋರ್ವರಿಗೆ ಸುಟ್ಟ ಗಾಯಗಳಾಗಿವೆ. ಇನ್ನು ಎಂಟು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!