Wednesday, September 30, 2026
Homeಕರಾವಳಿಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಸ್ಫೋಟದಿಂದ ಉಂಟಾಗಿರುವ ಹಾನಿಗೆ ಸೂಕ್ತ ಪರಿಹಾರ ಹಾಗೂ ಸಮಗ್ರ ತನಿಖೆಗೆ ಐವನ್...

ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಸ್ಫೋಟದಿಂದ ಉಂಟಾಗಿರುವ ಹಾನಿಗೆ ಸೂಕ್ತ ಪರಿಹಾರ ಹಾಗೂ ಸಮಗ್ರ ತನಿಖೆಗೆ ಐವನ್ ಡಿಸೋಜ ಆಗ್ರಹ

- Advertisement -
- Advertisement -

ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ಸ್ಫೋಟದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಂಟಾಗಿರುವ ಆಸ್ತಿ ಪಾಸ್ತಿ ಹಾನಿ ಹಾಗೂ ಜೀವಹಾನಿಗೆ ಸಂಬಂಧಿಸಿದಂತೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಗ್ರಹಿಸಿದ್ದಾರೆ.

ಸ್ಫೋಟದ ತೀವ್ರತೆಗೆ ಎಂಆರ್‌ಪಿಎಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪದ ರೀತಿಯ ಅನುಭವವಾಗಿದ್ದು, ಹಲವು ಮನೆಗಳು, ಕಟ್ಟಡಗಳು ಹಾಗೂ ಪ್ರಾರ್ಥನಾ ಕೇಂದ್ರ ಸೇರಿದಂತೆ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಹಾನಿಯಾಗಿರುವ ವರದಿಗಳಿವೆ. ಈ ಹಿನ್ನೆಲೆಯಲ್ಲಿ ಸ್ಫೋಟದಿಂದ ಉಂಟಾಗಿರುವ ಹಾನಿಯ ಕುರಿತು ಕೂಡಲೇ ಸಮಗ್ರ ಸಮೀಕ್ಷೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಹಾನಿಗೊಳಗಾದ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗಳ ನಷ್ಟವನ್ನು ಪರಿಶೀಲಿಸಿ, ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಮುಂಡ್ಕೂರು ಶ್ಯಾಮ್ ಪ್ರಸಾದ್ ಕಾಮತ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮನವಿ ಮಾಡಿರುವುದಾಗಿ ಐವನ್ ಡಿಸೋಜ ತಿಳಿಸಿದ್ದಾರೆ.

ಅದೇ ವೇಳೆ, ಘಟನೆಯಲ್ಲಿ ಸಂಭವಿಸಿರುವ ಜೀವಹಾನಿಗೆ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಬೇಕು. ಸ್ಫೋಟದ ನಿಖರ ಕಾರಣಗಳನ್ನು ಪರಿಶೀಲಿಸಿ, ಎಂಆರ್‌ಪಿಎಲ್‌ನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಸುರಕ್ಷತಾ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!