Thursday, October 1, 2026
Homeಕರಾವಳಿನವರಾತ್ರಿ ಮಹೋತ್ಸವದ ಅಂಗವಾಗಿ ಅಕ್ಟೋಬರ್ 4 ರಂದು `ದಸರಾ ಕ್ರೀಡಾಕೂಟ'

ನವರಾತ್ರಿ ಮಹೋತ್ಸವದ ಅಂಗವಾಗಿ ಅಕ್ಟೋಬರ್ 4 ರಂದು `ದಸರಾ ಕ್ರೀಡಾಕೂಟ’

- Advertisement -
- Advertisement -

ಬಂಟ್ವಾಳ: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ (ರಿ.) ಮಾಣಿ ವತಿಯಿಂದ ನವರಾತ್ರಿ ಮಹೋತ್ಸವದ ಅಂಗವಾಗಿ ಅಕ್ಟೋಬರ್ 4 ಭಾನುವಾರದಂದು ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ. ವಿವಿಧ ಕ್ರೀಡಾ ಚಟುವಟಿಕೆಗಳ ಜೊತೆಗೆ ನವರಾತ್ರಿ ಸಂಭ್ರಮವನ್ನು ಆಚರಿಸುವ ಉದ್ದೇಶದಿಂದ ಸಾರ್ವಜನಿಕ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಸ್ಪರ್ಧೆಯನ್ನೂ ನಡೆಸಲಾಗುತ್ತಿದೆ.

ಕಾರ್ಯಕ್ರಮವನ್ನು ಶ್ರೀ ಸಚಿನ್‌ ರೈ ಮಾಣಿಗುತ್ತು ಆಡಳಿತ ಮೊಕ್ತೇಸರರು, ಶ್ರೀ ಉಳ್ಳಾಲ್ತಿ ದೈವಸ್ಥಾನ ಮಾಣಿ, ಗೌರವ ಉಪಸ್ಥಿತಿಯಲ್ಲಿ ಶ್ರೀ ಗಂಗಾಧರ ರೈ ತುಂಗೆರೆಕೋಡಿ ನಿವೃತ್ತ ದೈಹಿಕ ಶಿಕ್ಷಕರು ಭಾಗಿಯಾಗಲಿದ್ದಾರೆ.

ಕ್ರೀಡಾಕೂಟದ ಅಂಗವಾಗಿ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕಾರ್ಯಕ್ರಮದಲ್ಲಿ ಗಣ್ಯರು, ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

- Advertisement -

Latest News

error: Content is protected !!