Friday, October 2, 2026
Homeಕರಾವಳಿಮಂಗಳೂರುಧರ್ಮಸ್ಥಳ ಭಜನಾ ಕಮ್ಮಟದ 5ನೇ ದಿನ: ರಾಜೇಶ್ ಪಡಿಯಾರ್ ಅವರಿಂದ ದಾಸ ಕೀರ್ತನೆಗಳ ತರಬೇತಿ

ಧರ್ಮಸ್ಥಳ ಭಜನಾ ಕಮ್ಮಟದ 5ನೇ ದಿನ: ರಾಜೇಶ್ ಪಡಿಯಾರ್ ಅವರಿಂದ ದಾಸ ಕೀರ್ತನೆಗಳ ತರಬೇತಿ

- Advertisement -
- Advertisement -

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.2 ಶುಕ್ರವಾರದಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದ್ದು, ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.

ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!