Saturday, October 3, 2026
Homeಕರಾವಳಿಎಸ್‌ಐಆರ್ ಫಾರಂನಿಂದ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸಿರುವ ಆರೋಪ; ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಬೆಳ್ತಂಗಡಿ...

ಎಸ್‌ಐಆರ್ ಫಾರಂನಿಂದ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸಿರುವ ಆರೋಪ; ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

- Advertisement -
- Advertisement -

ಬೆಳ್ತಂಗಡಿ: ಎಸ್‌ಐಆರ್ ಫಾರಂ–7 ಮೂಲಕ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಸಮುದಾಯಗಳ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸಿರುವ ಆರೋಪದ ಕುರಿತು, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಅ.3 ರಂದು ಬೆಳ್ತಂಗಡಿ ತಹಸೀಲ್ದಾರ್ ಎಸ್. ಎನ್ ನರಗುಂದ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗೆ ಡಿವೈಎಸ್ಪಿ ರೋಹಿನಿ.ಸಿ.ಕೆ ಮತ್ತು ಪಿಎಸ್ಐ ಅನಂದ.ಎಂ ಮೂಲಕ ದೂರು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ, ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಅಲ್ಪಸಂಖ್ಯಾತರ ಗ್ರಾಮೀಣ ಅಧ್ಯಕ್ಷ ಸೆಬಾಸ್ಟಿಯನ್ ಕಳೆಂಜ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್ ಉಜಿರೆ, ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ನಾರಾಯಣ ಗೌಡ, ಎಸ್.ಎಸ್ಟಿ ಘಟಕದ ಗ್ರಾಮೀಣ ಅಧ್ಯಕ್ಷ ನೇಮಿರಾಜ್ ಕಿಲ್ಲೂರು, ಪ್ರಮುಖರಾದ ಲಕ್ಷ್ಮಣ, ಶ್ರೀನಿವಾಸ ಉಜಿರೆ, ಜಯಾನಂದ ಪಿಲಿಕಳ, ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ ಇನ್ನಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!