Saturday, October 3, 2026
Homeಕರಾವಳಿಮಂಗಳೂರುಮಂಗಳೂರು: ಮನೆಗಳ್ಳತನ ನಡೆಸಿದ್ದ ದೆಹಲಿ ಮೂಲದ ಇಬ್ಬರು ಕುಖ್ಯಾತ ಖದೀಮರ ಬಂಧನ

ಮಂಗಳೂರು: ಮನೆಗಳ್ಳತನ ನಡೆಸಿದ್ದ ದೆಹಲಿ ಮೂಲದ ಇಬ್ಬರು ಕುಖ್ಯಾತ ಖದೀಮರ ಬಂಧನ

- Advertisement -
- Advertisement -

ಮಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರನ್ನು ಮಂಗಳೂರು ಪೊಲೀಸರು ಗುಜರಾತ್‌ನ ವಡೋದರಾದಲ್ಲಿ ಬಂಧಿಸಿದ್ದಾರೆ.

ದೆಹಲಿಯ ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34) ಮತ್ತು ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು.

ಸೆಪ್ಟೆಂಬರ್ 28ರಂದು ಅಳಕೆಯ ಸಹಯೋಗ ರೆಸಿಡೆನ್ಸಿಯ ಮನೆಯೊಂದರ ಬಾಗಿಲು ಮುರಿದು 14 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಲಾಗಿತ್ತು. ಅಲ್ಲದೆ ಸೆಪ್ಟೆಂಬರ್ 27ರಂದು ಬೊಕ್ಕಪಾಟ್ನದ ಮನೆಯೊಂದರಲ್ಲೂ ಕಳ್ಳತನಕ್ಕೆ ಯತ್ನಿಸಿದ್ದರು.

ಪ್ರಕರಣ ದಾಖಲಾದ 24 ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ರೈಲಿನಲ್ಲಿ ದೆಹಲಿಗೆ ಪರಾರಿಯಾಗುತ್ತಿದ್ದ ಆರೋಪಿಗಳನ್ನು ವಡೋದರ ಪೊಲೀಸರ ನೆರವಿನಿಂದ ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 18 ಲಕ್ಷ ರೂಪಾಯಿ ಮೌಲ್ಯದ ಕಳುವಾದ ಎಲ್ಲಾ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ.

ಆರೋಪಿ ಅರ್ಮಾನ್ ಖಾನ್ ವಿರುದ್ಧ ಬೆಂಗಳೂರು, ಮುಂಬೈ, ದೆಹಲಿ ಸೇರಿ ದೇಶಾದ್ಯಂತ 40ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!