Monday, October 5, 2026
Homeಕರಾವಳಿಮಂಗಳೂರುಪುತ್ತೂರು: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲೀಕ ಮುಳಿಯ ಶ್ಯಾಮ ಭಟ್ ನಿಧನ

ಪುತ್ತೂರು: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲೀಕ ಮುಳಿಯ ಶ್ಯಾಮ ಭಟ್ ನಿಧನ

- Advertisement -
- Advertisement -

ಪುತ್ತೂರು : ರಾಜ್ಯದ ಪ್ರಸಿದ್ಧ ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕರಾದ ಮುಳಿಯ ಸರಾಫ್ ಶ್ಯಾಮ ಭಟ್ (81) ಅವರು ಅಲ್ಪಕಾಲದ ಅಸೌಖ್ಯದಿಂದ ಅಕ್ಟೋಬರ್ 4ರಂದು ಪಾಂಗಳಾಯಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಶ್ಯಾಮ ಭಟ್ ಅವರು ಸಂಸ್ಥೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಸ್ತುತ ಈ ಸಂಸ್ಥೆಯು ಪುತ್ತೂರು, ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಮುಖ ಶೋರೂಮ್‌ಗಳನ್ನು ಹೊಂದಿದೆ.

ವ್ಯವಹಾರದ ಜೊತೆಗೆ ಸಾಮಾಜಿಕ, ಸಾಹಿತ್ಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಕೊಡುಗೈ ದಾನಿಯಾಗಿ ಅವರು ಸಕ್ರಿಯರಾಗಿದ್ದರು. ಮೃತರ ಅಂತಿಮ ದರ್ಶನಕ್ಕೆ ಅಕ್ಟೋಬರ್ 6ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ಪುತ್ತೂರಿನ ಪಾಂಗಳಾಯಿ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

- Advertisement -

Latest News

error: Content is protected !!