Monday, October 5, 2026
Homeಕರಾವಳಿಮಂಗಳೂರುಬಂಟ್ವಾಳ; ಪುಂಜಾಲಕಟ್ಟೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ; ಮಹಿಳೆಗೆ ತೀವ್ರ ಗಾಯ

ಬಂಟ್ವಾಳ; ಪುಂಜಾಲಕಟ್ಟೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ; ಮಹಿಳೆಗೆ ತೀವ್ರ ಗಾಯ

- Advertisement -
- Advertisement -

ಬಂಟ್ವಾಳ : ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ಸೋಮವಾರ ಬೆಳಗಿನ ಜಾವ ಸಿಡಿಲು ಬಡಿದು ಮನೆಯೊಂದು ಸಂಪೂರ್ಣವಾಗಿ ಹಾನಿಗೊಂಡಿದ್ದು, ಮಹಿಳೆಯೊಬ್ಬರು ತೀವ್ರ ಗಾಯಗೊಂಡ ಘಟನೆ ನಡೆದಿದೆ.

ಇಲ್ಲಿನ ನಿವಾಸಿ ನಾಗೇಶ್ ಕುಲಾಲ್ ಅವರ ಹೆಂಚಿನ ಮನೆಗೆ ಬೆಳಿಗ್ಗೆ ಸುಮಾರು 6 ಗಂಟೆಗೆ ಸಿಡಿಲು ಬಡಿದ್ದಿದ್ದು, ಸಿಡಿಲಿನ ಆಘಾತಕ್ಕೆ ಮನೆಯ ಹೆಂಚಿನ ಛಾವಣಿ ಸೇರಿದಂತೆ ಒಳಗಿದ್ದ ಸಾಮಾನೆಲ್ಲವೂ ಸಂಪೂರ್ಣ ಧ್ವಂಸಗೊಂಡಿದೆ.

ಘಟನೆ ಸಂಭವಿಸಿದ ವೇಳೆ ಅಡುಗೆ ಕೋಣೆಯಲ್ಲಿದ್ದ ನಾಗೇಶ್ ಅವರ ಪತ್ನಿ ಕುಶಲಾಕ್ಷಿ ಅವರಿಗೆ ತೀವ್ರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!