- Advertisement -
- Advertisement -
ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮಂಗಳವಾರ (ಆ.6) ಕರಿಕ್ಕಳ–ನಿಂತಿಕಲ್ಲು ನಡುವಿನ ಮುಚ್ಚಿಲ ಬಳಿ ಅಪಘಾತಕ್ಕೀಡಾಗಿದೆ.
ಮುಚ್ಚಿಲ ಸಮೀಪ ಎದುರಿನಿಂದ ಬರುತ್ತಿದ್ದ ಕಾರೊಂದು ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಶಾಸಕಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅದರ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ಜಖಂಗೊಂಡಿದೆ.
ಅಪಘಾತದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
- Advertisement -


