- Advertisement -
- Advertisement -
ಚಿಕ್ಕಮಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ನಾಳೆ ಕರಡು ಮೀಸಲಾತಿ ಪ್ರಕಟವಾಗಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ ಖಂಡ್ರೆ ಚಿಕ್ಕಮಗಳೂರಿನಲ್ಲಿ ಇಂದು ಮಾಹಿತಿ ನೀಡಿದ್ದಾರೆ.
ಹತ್ತು ದಿನಗಳ ಕಾಲ ಕರಡು ಮೀಸಲಾತಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಇರಲಿದ್ದು, ಡಿಸೆಂಬರ್ ನಿಂದ ಜನವರಿ 15 ರೊಳಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಮುಗಿದಿದ್ದು, ನಾಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕರಡು ಮೀಸಲಾತಿ ಬಿಡುಗಡೆಯಾಗಲಿದೆ.
ಆಕ್ಷೇಪಣೆ ಸಲ್ಲಿಕೆಗೆ ಅವಧಿ ಮುಗಿದ ಬಳಿಕ ಅಂತಿಮ ಮೀಸಲಾತಿ ಪಟ್ಟಿ ರಾಜ್ಯ ಚುನಾವಣಾ ಆಯೋಗಕ್ಕೆ ಹಸ್ತಾಂತರವಾಗಲಿದೆ. ನವೆಂಬರ್ ನಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿ ಡಿಸೆಂಬರ್ 15 ರ ವೇಳೆಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ.
- Advertisement -


