ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ವರ್ಗವಾರು ಮೀಸಲಿರಿಸಿದ ಸ್ಥಾನಗಳ ಅಧಿಸೂಚನೆ ಪ್ರಕಟವಾಗಿದೆ.ರಾಜ್ಯದ ಒಟ್ಟು 31 ಜಿಲ್ಲೆಗಳ 1129 ಜಿಲ್ಲಾ ಪಂಚಾಯತ್ ಸ್ಥಾನಗಳು ಮತ್ತು 3656 ತಾಲೂಕು ಪಂಚಾಯತ್ ಸ್ಥಾನಗಳಿಗೆ ವರ್ಗವಾರು ಮೀಸಲಿರಿಸಿದ ಸ್ಥಾನಗಳ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಸಾಮಾನ್ಯ ಮತ್ತು ಮಹಿಳಾ ವರ್ಗಗಳಿಗೆ ಸ್ಥಾನಗಳನ್ನು ಮೀಸಲಿರಿಸಲಾಗಿದೆ.
1129 ಜಿಲ್ಲಾ ಪಂಚಾಯತ್ ಸ್ಥಾನಗಳ ಪೈಕಿ ಪರಿಶಿಷ್ಟ ಜಾತಿ ವರ್ಗಕ್ಕೆ 225, ಪರಿಶಿಷ್ಟ ಪಂಗಡ ವರ್ಗಕ್ಕೆ 102, ಹಿಂದುಳಿದ ವರ್ಗ ಎ ಗೆ 183, ಹಿಂದುಳಿದ ವರ್ಗ ಬಿ ಗೆ 43 ಮತ್ತು ಸಾಮಾನ್ಯ ವರ್ಗಕ್ಕೆ 576 ಸ್ಥಾನಗಳನ್ನು ಮೀಸಲಿರಿಸಲಾಗಿದೆ.
3656 ತಾಲೂಕು ಪಂಚಾಯತ್ ಸ್ಥಾನಗಳ ಪೈಕಿ ಪರಿಶಿಷ್ಟ ಜಾತಿಗೆ 733, ಪರಿಶಿಷ್ಟ ಪಂಗಡಕ್ಕೆ 394, ಹಿಂದುಳಿದ ವರ್ಗ ಎ ಗೆ 508, ಹಿಂದುಳಿದ ವರ್ಗ ಬಿ ಗೆ 111 ಮತ್ತು ಸಾಮಾನ್ಯ ವರ್ಗಕ್ಕೆ 1910 ಸ್ಥಾನಗಳನ್ನು ಮೀಸಲಿರಿಸಲಾಗಿದೆ.


