Friday, October 9, 2026
HomeWorldಸಿಜೆಪಿ ನೇತೃತ್ವದ ಜಂತರ್ ಮಂತರ್‌ ಪ್ರತಿಭಟನೆ; ಎಫ್‌ಐಆರ್ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಜಾ

ಸಿಜೆಪಿ ನೇತೃತ್ವದ ಜಂತರ್ ಮಂತರ್‌ ಪ್ರತಿಭಟನೆ; ಎಫ್‌ಐಆರ್ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಜಾ

- Advertisement -
- Advertisement -

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಜುಲೈನಲ್ಲಿ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದ ಎಫ್‌ಐಆರ್ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸುವಂತೆ ನಿರ್ದೇಶನ ನೀಡಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್‌ಮಾಲ್ಯ ಬಾಗ್ನಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು ಅರ್ಜಿಯ ವಿಚಾರಣೆ ನಡೆಸಿತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧಗಳ ತನಿಖೆ ನಡೆಸುವಲ್ಲಿ ಪೊಲೀಸರಿಗೆ ಸ್ವತಂತ್ರ ಅಧಿಕಾರವಿದೆ ಎಂದು ಘೋಷಿಸಬೇಕೆಂಬ ಅರ್ಜಿದಾರರ ಮನವಿಯನ್ನೂ ನ್ಯಾಯಪೀಠ ತಿರಸ್ಕರಿಸಿತು.

ಅರ್ಜಿದಾರ ಎಲ್. ರಾಮನಾಥನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮ್ಯಾಥ್ಯೂಸ್ ನೆಡುಂಪಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಸಿಂಧುತ್ವವನ್ನು ಪ್ರಶ್ನಿಸಿದರು. ಅಲ್ಲದೆ, ಸಂವಿಧಾನದ 142ನೇ ವಿಧಿಯನ್ನು ಬಳಸಿಕೊಂಡು ಕೆಲವು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ್ದ ಕ್ರಮಕ್ಕೂ ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, “ನಾವು ನೀಡುವ ಶೇ.100ರಷ್ಟು ಆದೇಶಗಳೂ ಸರಿಯಾಗಿರುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ, 142ನೇ ವಿಧಿಯಡಿ ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹಿಂದಿನ ನಿರ್ಧಾರದ ಉದ್ದೇಶವನ್ನು ಅರ್ಥಮಾಡಿಕೊಳ್ಳಬೇಕು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು ಯುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು. ಅವರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಅವರು ಅಪರಾಧಿಗಳಲ್ಲ” ಎಂದು ಸ್ಪಷ್ಟಪಡಿಸಿದರು.

ಕೊರೊನಾ ಅವಧಿಯಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಉಲ್ಲೇಖಿಸಿದ ನ್ಯಾಯಪೀಠ, ಪ್ರಸ್ತುತ ಅರ್ಜಿಯು ಸಂವಿಧಾನದ 142ನೇ ವಿಧಿಯಡಿ ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹಿಂದಿನ ಆದೇಶವನ್ನು ಮರುಪರಿಶೀಲಿಸುವಂತೆ ಕೋರುವಂತಿದೆ ಎಂದು ಅಭಿಪ್ರಾಯಪಟ್ಟಿತು.

ಪೊಲೀಸ್ ತನಿಖೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡಬಾರದು ಹಾಗೂ ತನಿಖೆ ಸ್ವತಂತ್ರವಾಗಿ ನಡೆಯುವಂತೆ ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂಬ ಅರ್ಜಿದಾರರ ವಾದವನ್ನು ಸುಪ್ರೀಂ ಕೋರ್ಟ್ ಒಪ್ಪಲಿಲ್ಲ. ಈ ಮೂಲಕ ಹಿಂದಿನ ನಿರ್ಧಾರವನ್ನು ಎತ್ತಿಹಿಡಿದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿತು.

ಈ ಪ್ರತಿಭಟನೆಯ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದ

- Advertisement -

Latest News

error: Content is protected !!