Saturday, October 10, 2026
Homeಕರಾವಳಿಮಂಗಳೂರುಸುಳ್ಯ: ಮನೆಯಲ್ಲಿ ಯುವತಿ ನೇಣು ಬಿಗಿದು ಆತ್ಮಹ*ತ್ಯೆ

ಸುಳ್ಯ: ಮನೆಯಲ್ಲಿ ಯುವತಿ ನೇಣು ಬಿಗಿದು ಆತ್ಮಹ*ತ್ಯೆ

- Advertisement -
- Advertisement -

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಾವೂರು ಕಾಲೊನಿಯಲ್ಲಿ ಯುವತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ನಾವೂರಿನ ಮುತ್ತು ಎಂಬವರ ಪುತ್ರಿ ಚಾಂದಿನಿ ಮೃತ ದುರ್ದೈವಿ.

ನಿನ್ನೆ ಮಧ್ಯಾಹ್ನದ ವೇಳೆಗೆ ಚಾಂದಿನಿ ಮನೆಯೊಳಗೆ ನೇಣು ಬಿಗಿದುಕೊಂಡಿದ್ದಾರೆ. ಸಂಜೆ ತಾಯಿ ಮನೆಗೆ ವಾಪಸ್ ಬಂದಾಗ ಮನೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿಕೊಂಡಿರುವುದು ತಿಳಿದುಬಂದಿದೆ. ಸಂಶಯಗೊಂಡು ಕಿಟಕಿಯಿಂದ ಒಳಗೆಹೋಗಿ ನೋಡಿದಾಗ ಯುವತಿ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!