Sunday, October 11, 2026
Homeಕರಾವಳಿಮಂಗಳೂರುಬಂಟ್ವಾಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪ ಮೂಡ ಗ್ರಾಮದ ನಗ್ರಿ ಕಾಂಜಿಲ ಎಂಬಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಮೃತರನ್ನು ರಜಿತ್ ಕುಮಾರ್ (39) ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಬ್ಯಾಗ್ ಕಂಪೆನಿಯೊಂದರಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದ ರಜಿತ್ ಕುಮಾರ್, ಕಳೆದ ಮೂರು ತಿಂಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಊರಿಗೆ ಬಂದು ಸಜಿಪ ಮೂಡದಲ್ಲಿರುವ ತಮ್ಮ ಅಕ್ಕನ ಮನೆಯಲ್ಲಿ ವಾಸವಾಗಿದ್ದರು. ಎರಡು ದಿನಗಳ ಹಿಂದೆ ಅವರು ಮಂಗಳೂರಿನ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಕೂಡ ಪಡೆದುಕೊಂಡಿದ್ದರು ಎನ್ನಲಾಗಿದೆ.

ಗುರುವಾರ ರಾತ್ರಿ ಎಲ್ಲರೊಂದಿಗೆ ಊಟ ಮಾಡಿ ಮಲಗಿದ್ದ ಅವರು, ಶುಕ್ರವಾರ ಬೆಳಗ್ಗೆ ಎದ್ದೇಳದ ಕಾರಣ ಅನುಮಾನಗೊಂಡು ಪರಿಶೀಲಿಸಿದಾಗ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

- Advertisement -

Latest News

error: Content is protected !!