- Advertisement -
- Advertisement -
ಉಡುಪಿ: ನಗರದ ಹೃದಯಭಾಗದಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ಹಾಡಹಗಲೇ ಮೊಬೈಲ್ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಗ್ರಾಹಕರೊಬ್ಬರು ತಮ್ಮ ಮೊಬೈಲ್ ಪಡೆಯಲು ಅಂಗಡಿಗೆ ಬಂದಾಗ ಕಳ್ಳತನವಾಗಿರುವುದು ತಿಳಿದುಬಂದಿದೆ. ಬಳಿಕ ಅಂಗಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಳ್ಳತನದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಪತ್ತೆಯಾಗಿದೆ.
ನಗರದ ಜನನಿಬಿಡ ಪ್ರದೇಶದಲ್ಲೇ ಈ ಘಟನೆ ನಡೆದಿರುವುದು ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
- Advertisement -


