Monday, October 12, 2026
Homeಮನರಂಜನೆಕಿರುತೆರೆ ನಟಿ ಐಶ್ವರ್ಯಾ ಪಿಸ್ಸೆ ದಾಂಪತ್ಯ ಜೀವನ ಅಂತ್ಯ

ಕಿರುತೆರೆ ನಟಿ ಐಶ್ವರ್ಯಾ ಪಿಸ್ಸೆ ದಾಂಪತ್ಯ ಜೀವನ ಅಂತ್ಯ

- Advertisement -
- Advertisement -

ಬೆಂಗಳೂರು: ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಗುರುತಿಸಿಕೊಂಡಿರುವ ಜನಪ್ರಿಯ ನಟಿ ಐಶ್ವರ್ಯಾ ಪಿಸ್ಸೆ ತಮ್ಮ ಪತಿ ಹರಿ ವಿನಯ್‌ ಜತೆಗಿನ ದಾಂಪತ್ಯ ಜೀವನಕ್ಕೆ ಅಧಿಕೃತವಾಗಿ ತೆರೆ ಎಳೆದಿದ್ದು, ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ತಾವು ಕಳೆದ ಒಂದೂವರೆ ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಸಾಕಷ್ಟು ಯೋಚಿಸಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಐಶ್ವರ್ಯಾ ತಿಳಿಸಿದ್ದಾರೆ. ವೀಕ್ಷಣೆಗಳು ಹಾಗೂ ಫಾಲೋವರ್ಸ್‌ ಹೆಚ್ಚಿಸಿಕೊಳ್ಳಲು ಸುಳ್ಳು ಕಥೆಗಳನ್ನು ಸೃಷ್ಟಿಸುವುದು, ದಾರಿ ತಪ್ಪಿಸುವ ವೀಡಿಯೋಗಳನ್ನು ಪ್ರಕಟಿಸುವುದು ಅಥವಾ ವೈಯಕ್ತಿಕ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳುವುದು ಕಾನೂನುಬಾಹಿರ ಎಂದು ಎಚ್ಚರಿಸಿದ್ದಾರೆ. ತೆರೆಯ ಮೇಲಿನ ಜೀವನಕ್ಕೂ ನಿಜ ಜೀವನಕ್ಕೂ ವ್ಯತ್ಯಾಸವಿದ್ದು, ತಮ್ಮ ಖಾಸಗಿತನವನ್ನು ಗೌರವಿಸುವಂತೆ ಅವರು ಮನವಿ ಮಾಡಿದ್ದಾರೆ. ಅಲ್ಲದೆ, ಸುಳ್ಳು ಹಾಗೂ ಮಾನಹಾನಿಕರ ವಿಷಯಗಳನ್ನು ಹರಡುವುದನ್ನು ಮುಂದುವರಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಟಿ ಐಶ್ವರ್ಯಾ ಪಿಸ್ಸೆ ಅವರು ‘ಸರ್ವಮಂಗಳ ಮಾಂಗಲ್ಯೆ’, ‘ಸುಂದರಿ’, ‘ಅನುರೂಪ’ ಸೇರಿದಂತೆ ಹಲವು ಕನ್ನಡ, ತಮಿಳು ಹಾಗೂ ತೆಲುಗು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ಯಶ್ ಅಭಿನಯದ ‘ಸಂತು ಸ್ಟ್ರೈಟ್ ಫಾರ್ವರ್ಡ್’ ಸಿನಿಮಾದಲ್ಲೂ ಅಭಿನಯಿಸಿರುವ ಇವರು, 2019ರಲ್ಲಿ ಹರಿ ವಿನಯ್ ಜೊತೆ ವಿವಾಹವಾಗಿದ್ದರು.

- Advertisement -

Latest News

error: Content is protected !!