Tuesday, October 13, 2026
Homeಪ್ರಮುಖ-ಸುದ್ದಿಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳದ ಕಾಯ್ದೆ ರದ್ದುಪಡಿಸಿದ ಹೈಕೋರ್ಟ್

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳದ ಕಾಯ್ದೆ ರದ್ದುಪಡಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯನ್ನು ಶೇ. 50ರ ಮಿತಿಗಿಂತ ಹೆಚ್ಚಿಸಿ ಶೇ. 56ಕ್ಕೆ ಏರಿಸಿದ್ದ ರಾಜ್ಯ ಸರ್ಕಾರದ ಕಾಯ್ದೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ರದ್ದುಪಡಿಸಿದೆ.

ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ಇಂದು ಈ ತೀರ್ಪು ಪ್ರಕಟಿಸಿದೆ.

ರಾಜ್ಯ ಸರ್ಕಾರವು ಸರ್ಕಾರಿ ನೇಮಕಾತಿ ಹಾಗೂ ಶೈಕ್ಷಣಿಕ ಪ್ರವೇಶಗಳಲ್ಲಿ ಎಸ್‌ಸಿ ಮೀಸಲಾತಿಯನ್ನು ಶೇ. 15ರಿಂದ 17ಕ್ಕೆ ಮತ್ತು ಎಸ್‌ಟಿ ಮೀಸಲಾತಿಯನ್ನು ಶೇ. 3ರಿಂದ 7ಕ್ಕೆ ಹೆಚ್ಚಿಸಿ ಕಾಯ್ದೆ ರೂಪಿಸಿತ್ತು. ಈ ಕ್ರಮವು ಸಂವಿಧಾನದ ಚೌಕಟ್ಟು ಹಾಗೂ ಸುಪ್ರೀಂ ಕೋರ್ಟ್‌ನ ತೀರ್ಪುಗಳಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿ ಮಹೇಂದ್ರ ಕುಮಾರ್ ಮಿಶ್ರಾ ಎಂಬುವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ವಿಭಾಗೀಯ ಪೀಠವು, ಸುಪ್ರೀಂ ಕೋರ್ಟ್‌ನ ಇಂದಿರಾ ಸಾಹ್ನಿ ಪ್ರಕರಣದ ತೀರ್ಪನ್ನು ಉಲ್ಲೇಖಿಸಿದೆ. ಸಾಮಾನ್ಯವಾಗಿ ಮೀಸಲಾತಿಯ ಪ್ರಮಾಣವು ಶೇ. 50ರ ಮಿತಿಯನ್ನು ಮೀರಬಾರದು. ಅದನ್ನು ಮೀರಬೇಕಾದರೆ ಅಸಾಧಾರಣ ಮತ್ತು ಸಮರ್ಥನೀಯ ಕಾರಣಗಳಿರಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಆದರೆ, ಈ ಪ್ರಕರಣದಲ್ಲಿ ಮೀಸಲಾತಿಯ ಶೇ. 50ರ ಮಿತಿಯನ್ನು ಮೀರುವುದಕ್ಕೆ ಅಗತ್ಯವಾದ ಅಸಾಧಾರಣ ಕಾರಣಗಳು ಕಂಡುಬಂದಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ರಾಜ್ಯ ಸರ್ಕಾರದ ಕಾಯ್ದೆಯನ್ನು ರದ್ದುಗೊಳಿಸಿದೆ.

- Advertisement -

Latest News

error: Content is protected !!