- Advertisement -
- Advertisement -
ಬೆಂಗಳೂರು: ನಗರದ ಎಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಭೂತಿಪುರ ಬಳಿ ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆಗೈದ ಘಟನೆ ನಡೆದಿದೆ. ಸುಮಾರು 25 ವರ್ಷ ವಯಸ್ಸಿನ ಯುವಕನ ಮೃತದೇಹ ಪತ್ತೆಯಾಗಿದ್ದು, ಆತನ ಗುರುತು ಇನ್ನೂ ಪತ್ತೆಯಾಗಿಲ್ಲ.
ಭಾನುವಾರ ತಡರಾತ್ರಿ ವಿಭೂತಿಪುರ ಬಳಿ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಆತನ ಮೇಲೆ ಹಲ್ಲೆ ನಡೆಸಿ ಮುಖ ಹಾಗೂ ದೇಹದ ಇತರ ಭಾಗಗಳಿಗೆ ಕಲ್ಲಿನಿಂದ ಹೊಡೆದು ಹತ್ಯೆಗೈದಿದ್ದಾರೆ. ಹಲ್ಲೆಯಿಂದ ಮುಖ ವಿರೂಪಗೊಂಡಿರುವ ಕಾರಣ ಮೃತನ ಗುರುತು ಪತ್ತೆಹಚ್ಚಲು ಪೊಲೀಸರಿಗೆ ಸವಾಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತನ ಗುರುತು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
- Advertisement -


