Sunday, October 18, 2026
Homeಕರಾವಳಿಮಂಗಳೂರುಪುತ್ತೂರು, ಮೂಡಬಿದಿರೆ ಮತ್ತು ಮೂಲ್ಕಿ ಬರ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ

ಪುತ್ತೂರು, ಮೂಡಬಿದಿರೆ ಮತ್ತು ಮೂಲ್ಕಿ ಬರ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರ ಇಂದು ಮತ್ತೆ ಒಂಬತ್ತು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ಪುತ್ತೂರು, ಮೂಡಬಿದಿರೆ ಮತ್ತು ಮೂಲ್ಕಿ ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿದಂತಾಗಿದೆ. ಕೆಲವು ತಾಲೂಕುಗಳಲ್ಲಿ ಟ್ರಿಗರ್ -1 ಪ್ರಕ್ರಿಯೆ ನಡೆಯುತ್ತಿದ್ದು, ಅವುಗಳು ಅರ್ಹತೆ ಪಡೆದರೆ ಗ್ರೌಂಡ್ ಟ್ರೂಥಿಂಗ್ ನಡೆಯಲಿದೆ.

ಇದೇ ವೇಳೆ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಿರುವ ಮನವಿ ಅಂತಿಮ ಹಂತದಲ್ಲಿದ್ದು, ಇನ್ನೊಂದು ವಾರದಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

- Advertisement -

Latest News

error: Content is protected !!