- Advertisement -
- Advertisement -
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಂಜೆ 4 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಲಿರುವ ಸಿಎಂ ಬಳಿಕ ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆಯ ಉಚ್ಚಿಲಕ್ಕೆ ತೆರಳಲಿದ್ದಾರೆ.
ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಅಭಿನಂದನಾ ಸಮಾರಂಭ ಮತ್ತು ಮಹಿಳಾ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಡಿ.ಕೆ. ಶಿವಕುಮಾರ್ ಬಳಿಕ ಮಂಗಳೂರಿಗೆ ಹಿಂತಿರುಗಲಿದ್ದಾರೆ.
ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಸಿಎಂ ಡಿ.ಕೆ. ಶಿವಕುಮಾರ್, ಶರನ್ನವರಾತ್ರಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಅಕ್ಟೋಬರ್ 12 ರಂದೇ ಡಿ.ಕೆ. ಶಿವಕುಮಾರ್ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು. ಆದರೆ ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾರಣ ಭೇಟಿ ಮುಂದೂಡಲ್ಪಟ್ಟಿತ್ತು.
- Advertisement -


