Saturday, October 17, 2026
Homeಪ್ರಮುಖ-ಸುದ್ದಿಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ನಿರ್ಬಂಧ: ಕೇಂದ್ರ ಸರ್ಕಾರ ಹಾಗೂ ದಿಲ್ಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ನಿರ್ಬಂಧ: ಕೇಂದ್ರ ಸರ್ಕಾರ ಹಾಗೂ ದಿಲ್ಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ದಿಲ್ಲಿಯ ಪ್ರಮುಖ ಪ್ರತಿಭಟನಾ ಸ್ಥಳವಾದ ಜಂತರ್ ಮಂತರ್‌ನಿಂದ ಪ್ರತಿಭಟನಾ ಸ್ಥಳದ ಮಾನ್ಯತೆಯನ್ನು ಹಿಂಪಡೆದ ಕೇಂದ್ರ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರಕಾರ ಮತ್ತು ದಿಲ್ಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಕೇಂದ್ರ ಸರಕಾರ ಮತ್ತು ದಿಲ್ಲಿ ಪೊಲೀಸರು ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು. ಅವರ ಉತ್ತರದಿಂದ ಸಮಾಧಾನವಾಗದಿದ್ದರೆ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂದು ನ್ಯಾಯಾಲಯ ಹೇಳಿದೆ.

ಸಮಿತಿಯೊಂದರ ಶಿಫಾರಸಿನ ಆಧಾರದ ಮೇಲೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನಿರಾಕರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರಕಾರದ ಪರ ವಕೀಲ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.

ಇದೇ ವೇಳೆ, ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಲು ಪರ್ಯಾಯ ಸ್ಥಳಗಳನ್ನು ಗುರುತಿಸಲಾಗಿದೆ. ರಾಮ್ ಲೀಲಾ ಮೈದಾನ, ಬುರಾರಿ ಮೈದಾನ ಹಾಗೂ ಪೂರ್ವ ದಿಲ್ಲಿಯ ಸಿಬಿಡಿ ಮೈದಾನವನ್ನು ಹೊಸ ಪ್ರತಿಭಟನಾ ಸ್ಥಳಗಳೆಂದು ಅಕ್ಟೋಬರ್ 11ರಂದು ದಿಲ್ಲಿ ಪೊಲೀಸರು ಘೋಷಿಸಿದ್ದರು. ಈ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲು ಪ್ರತ್ಯೇಕ ಪ್ರಮಾಣೀಕೃತ ಕಾರ್ಯಾಚರಣಾ ವಿಧಾನಗಳನ್ನು (ಎಸ್‌ಒಪಿ) ಪ್ರಕಟಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!