- Advertisement -
- Advertisement -
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಜಂಕ್ಷನ್ ಬಳಿ ಅಕ್ಟೋಬರ್ 13ರಂದು ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಕೋಟ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪುನೀತ್ ಮೊಟಾಲ್ (27), ಬಾಗೇಪಳ್ಳಿಯ ಗಣೇಶ್, ಚಿಕ್ಕಬಳ್ಳಾಪುರದ ಕೃಷ್ಣಪ್ಪ (40) ಹಾಗೂ ಶ್ರೀನಿವಾಸ (56) ಎಂದು ಗುರುತಿಸಲಾಗಿದೆ.
ಜಾನುವಾರುಗಳನ್ನು ಅಮಾನವೀಯವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಕುಮಾರ್ ಆರ್. ನೇತೃತ್ವದ ತಂಡ ವಾಹನವನ್ನು ತಡೆದಿದೆ. ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ನಾಲ್ವರನ್ನು ಬಂಧಿಸಿ, ಜಾನುವಾರುಗಳನ್ನು ರಕ್ಷಿಸಲಾಗಿದೆ.
ಸಾಗಾಟಕ್ಕೆ ಬಳಸಿದ್ದ ಪಿಕಪ್ ವಾಹನ ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
- Advertisement -


