Saturday, October 17, 2026
Homeಪ್ರಮುಖ-ಸುದ್ದಿಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರು ಒಬಿಸಿ ಮೀಸಲಾತಿ ಪಡೆಯಲು ಅರ್ಹರಲ್ಲ: ಮದ್ರಾಸ್ ಹೈಕೋರ್ಟ್ ಆದೇಶ ಎತ್ತಿಹಿಡಿದ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರು ಒಬಿಸಿ ಮೀಸಲಾತಿ ಪಡೆಯಲು ಅರ್ಹರಲ್ಲ: ಮದ್ರಾಸ್ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಹೊಸದಿಲ್ಲಿ: ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರು, ಹಿಂದಿನ ಸಾಮಾಜಿಕ ಸ್ಥಾನಮಾನದ ಆಧಾರದಲ್ಲಿ ಇತರೆ ಹಿಂದುಳಿದ ವರ್ಗಗಳ (OBC) ಮೀಸಲಾತಿ ಸೌಲಭ್ಯ ಪಡೆಯಲು ಅರ್ಹರಲ್ಲ ಎಂಬ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ.

ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಶ್ರೀಚಂದ್ರಶೇಖರ್ ಅವರನ್ನೊಳಗೊಂಡ ನ್ಯಾಯಪೀಠ, ಹಿಂದೂ ಸಾಮಾಜಿಕ ವ್ಯವಸ್ಥೆಯಿಂದ ಹಿಂದೂಯೇತರ ಸಾಮಾಜಿಕ ವ್ಯವಸ್ಥೆಗೆ ಮತಾಂತರಗೊಂಡ ವ್ಯಕ್ತಿಯು ತನ್ನ ಹಿಂದಿನ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿ ಸೌಲಭ್ಯಕ್ಕೆ ಹಕ್ಕು ಮಂಡಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಹಿಂದೂ ಧರ್ಮದ ಹಿಂದುಳಿದ ವರ್ಗಗಳಿಗೆ ಸೇರಿದವರು ಇಸ್ಲಾಂಗೆ ಮತಾಂತರಗೊಂಡ ಬಳಿಕ ಅವರನ್ನು ಹಿಂದುಳಿದ ಮುಸ್ಲಿಂ ವರ್ಗಗಳೆಂದು ಪರಿಗಣಿಸಲು ತಮಿಳುನಾಡು ಸರಕಾರ ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಏಳು ಪಂಗಡಗಳನ್ನು ಹಿಂದುಳಿದ ವರ್ಗಗಳೆಂದು ಗುರುತಿಸಿ ಮೀಸಲಾತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಂಡಿತ್ತು.

ಆದರೆ, ಸರಕಾರದ ಈ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಮೇಲ್ಮನವಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಎತ್ತಿಹಿಡಿದಿದೆ.

- Advertisement -

Latest News

error: Content is protected !!