Saturday, October 17, 2026
Homeಕರಾವಳಿಅ.18ರಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ 5ನೇ ಆವೃತ್ತಿಯ ಕುಡ್ಲದ ಪಿಲಿಪರ್ಬ!

ಅ.18ರಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ 5ನೇ ಆವೃತ್ತಿಯ ಕುಡ್ಲದ ಪಿಲಿಪರ್ಬ!

- Advertisement -
- Advertisement -

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗುತ್ತಿರುವ ಕುಡ್ಲದ ಪಿಲಿಪರ್ಬದ ಐದನೇ ಆವೃತ್ತಿ ಅಕ್ಟೋಬರ್ 18ರಂದು ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಬೆಳಗ್ಗೆ 9.30ಕ್ಕೆ ಉದ್ಘಾಟನೆಗೊಳ್ಳಲಿದ್ದು, 10 ಗಂಟೆಯಿಂದ ಹುಲಿವೇಷ ಸ್ಪರ್ಧೆ ಆರಂಭವಾಗಲಿದೆ ಎಂದರು. ಕರಾವಳಿಯ 11 ಹುಲಿವೇಷ ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದು, ಪ್ರತಿ ತಂಡಕ್ಕೆ 20 ನಿಮಿಷಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವೈಭವದ ಮೆರವಣಿಗೆ, ಅಕ್ಕಿಮುಡಿ ಹಾಗೂ ವಿವಿಧ ಹುಲಿವೇಷಗಳ ಪ್ರದರ್ಶನ ಕಾರ್ಯಕ್ರಮದ ಪ್ರಮುಖ ಆಕರ್ಷಣೆಗಳಾಗಿವೆ ಎಂದು ಹೇಳಿದರು.

ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ₹5 ಲಕ್ಷ, ದ್ವಿತೀಯ ಬಹುಮಾನವಾಗಿ ₹3 ಲಕ್ಷ ಹಾಗೂ ತೃತೀಯ ಬಹುಮಾನವಾಗಿ ₹2 ಲಕ್ಷ ನಗದು ಮತ್ತು ಸ್ಮರಣಿಕೆಯನ್ನು ನೀಡಲಾಗುತ್ತದೆ. ಭಾಗವಹಿಸುವ ಪ್ರತಿಯೊಂದು ತಂಡಕ್ಕೂ ₹50 ಸಾವಿರ ಗೌರವಧನ ನೀಡಲಾಗುವುದರ ಜೊತೆಗೆ ವೈಯಕ್ತಿಕ ಹಾಗೂ ವಿವಿಧ ವಿಭಾಗಗಳಲ್ಲಿಯೂ ಬಹುಮಾನ ವಿತರಿಸಲಾಗುತ್ತದೆ.

ಸ್ಪರ್ಧೆಯ ಮೌಲ್ಯಮಾಪನಕ್ಕಾಗಿ ಆರು ಮಂದಿ ತೀರ್ಪುಗಾರರನ್ನು ನೇಮಿಸಲಾಗಿದ್ದು, ವಿಡಿಯೋ ಪರಿಶೀಲನೆಯ ಮೂಲಕ ಪಾರದರ್ಶಕ ತೀರ್ಪು ನೀಡಲು ವ್ಯವಸ್ಥೆ ಮಾಡಲಾಗಿದೆ. ಸುಮಾರು ಐದು ಸಾವಿರ ಮಂದಿ ಕುಳಿತು ವೀಕ್ಷಿಸಬಹುದಾದ ಗ್ಯಾಲರಿ, ಬೃಹತ್ ಪರದೆ, ನೇರ ಪ್ರಸಾರ ಹಾಗೂ ವಾಹನ ನಿಲುಗಡೆ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಕಾರ್ಯಕ್ರಮ ರಾತ್ರಿ 10 ಗಂಟೆಯೊಳಗೆ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ಯತೀಶ್ ಬೈಕಂಪಾಡಿ, ಲಲಿತ್ ಮೆಂಡನ್, ನವನೀತ್ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!