Saturday, October 17, 2026
Homeಕರಾವಳಿಮಂಗಳೂರುಕಡಬ: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಕಡಬ: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

- Advertisement -
- Advertisement -

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಜೀವ ಬೆದರಿಕೆ ಪ್ರಕರಣದ ಆರೋಪಿಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.

ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ (30) ಶಿಕ್ಷೆಗೆ ಗುರಿಯಾದ ಆರೋಪಿ. ಈತ 2021ರ ಮೇ 8ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ವಿಷಯ ಹೊರತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದನು. ಈ ಸಂಬಂಧ ಕಡಬ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಆಗಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಯು. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಆಡ್ಯಂತಾಯ ವಾದ ಮಂಡಿಸಿದ್ದರು.

- Advertisement -

Latest News

error: Content is protected !!