- Advertisement -
- Advertisement -
ಮಂಗಳೂರು: ನಗರದ ಚರ್ಚ್ ಒಂದರ ಧರ್ಮಗುರುವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ಕೇಳಿಬಂದಿದೆ. ಧರ್ಮಪ್ರಾಂತದ ಬಿಷಪ್ಗೆ ದೂರು ನೀಡಿದರೂ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ, ಸಂತ್ರಸ್ತ ಮಕ್ಕಳು ಹಾಗೂ ಪೋಷಕರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದಾರೆ.
ಮಂಗಳೂರು ಧರ್ಮಪ್ರಾಂತಕ್ಕೆ ಸೇರಿದ ಪಾದ್ರಿಯೊಬ್ಬರು 50ಕ್ಕೂ ಹೆಚ್ಚು ಬಾಲಕರ ಮೇಲೆ ಲೈಂಗಿಕ ಶೋಷಣೆ ಎಸಗಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ನಿರ್ದೇಶನಾಲಯವು ಸೂಚನೆ ನೀಡಿದೆ. ಪ್ರಕರಣದ ಕುರಿತು ಪೊಲೀಸ್ ಇಲಾಖೆಯ ಗಮನಕ್ಕೂ ತರಲಾಗಿದ್ದು, ತನಿಖೆ ಮುಂದುವರಿದಿದೆ.
- Advertisement -


