- Advertisement -
- Advertisement -
ಉಳ್ಳಾಲ: ಪರವಾನಿಗೆ ಇಲ್ಲದೆ ಕಾರ್ಯಾಚರಿಸುತ್ತಿದ್ದ ಗುಜರಿ ಅಂಗಡಿಯೊಂದರಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ಕುಂಪಲದ ಚೇತನ ನಗರದಲ್ಲಿ ನಡೆದಿದೆ.
ಚೇತನ ನಗರದ ಬಾಡಿಗೆ ಕೋಣೆಯಲ್ಲಿ ಅಬ್ದುಲ್ ತುಫೈಲ್ ಎಂಬವರು ಗುಜರಿ ಅಂಗಡಿ ನಡೆಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಪುರಸಭೆಯು ಅಂಗಡಿ ಮಾಲಕನಿಗೆ ಈಗಾಗಲೇ ಮೂರು ಬಾರಿ ನೋಟಿಸ್ ನೀಡಿತ್ತು ಎಂದು ತಿಳಿದುಬಂದಿದೆ.
ಗುರುವಾರ ಸಂಜೆ ಅಂಗಡಿ ಮುಚ್ಚಿದ ಬಳಿಕ ಒಳಗಡೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅಕ್ಕಪಕ್ಕದ ಮನೆಗಳಿಗೆ ಹರಡುವುದನ್ನು ತಡೆಯಲು ಸ್ಥಳೀಯರು ತಕ್ಷಣ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಬಳಿಕ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
- Advertisement -


