- Advertisement -
- Advertisement -
ಕಾರವಾರ: ಭಾರತದ ಸ್ವದೇಶಿ ಬಹುಪಯೋಗಿ ಯುದ್ಧನೌಕೆ ‘ಐಎನ್ಎಸ್ ಸಮರ್ಥಕ್’ ಅಕ್ಟೋಬರ್ 16ರಂದು ಕಾರವಾರದ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು.
ಸಮುದ್ರ ಕಣ್ಗಾವಲು, ವಿಪತ್ತು ಪರಿಹಾರ, ರಕ್ಷಣಾ ಕಾರ್ಯಾಚರಣೆ ಹಾಗೂ ಮಾನವರಹಿತ ತಂತ್ರಜ್ಞಾನಗಳ ಪ್ರಯೋಗ ಸೇರಿದಂತೆ ಹಲವು ಕಾರ್ಯಗಳಿಗೆ ಈ ನೌಕೆಯನ್ನು ಬಳಸಬಹುದಾಗಿದೆ.
ದೇಶದ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಈ ಸೇರ್ಪಡೆ ಮಹತ್ವದ ಹೆಜ್ಜೆಯಾಗಿದೆ.
ಉಪ ರಾಷ್ಟ್ರಪತಿ ಚಂದ್ರಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಮಾರಂಭದಲ್ಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಸೇರಿದಂತೆ ಹಿರಿಯ ನೌಕಾಪಡೆ ಮತ್ತು ರಕ್ಷಣಾ ಇಲಾಖೆಯ ಅಧಿಕಾರಿಗಳು, ಗಣ್ಯರು ಹಾಗೂ ಎಲ್ ಆ್ಯಂಡ್ ಟಿ ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಿದ್ದರು.
- Advertisement -


