Friday, October 16, 2026
Homeಅಪರಾಧಹೋಂಸ್ಟೇ ವಿಚಾರದಲ್ಲಿ ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತರ ಬಲೆಗೆ;   ₹5,000 ಲಂಚ ಪಡೆದ...

ಹೋಂಸ್ಟೇ ವಿಚಾರದಲ್ಲಿ ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತರ ಬಲೆಗೆ;   ₹5,000 ಲಂಚ ಪಡೆದ ಆರೋಪ

- Advertisement -
- Advertisement -

ಕುಂದಾಪುರ: ಹೋಂಸ್ಟೇ ನಿರ್ಮಾಣಕ್ಕೆ ಎನ್‌ಒಸಿ ನೀಡಲು ₹5,000 ಲಂಚ ಪಡೆದ ಆರೋಪದ ಮೇಲೆ ಕುಂದಾಪುರ ತಾಲೂಕು ಕಚೇರಿಯ ಗ್ರಾಮ ಲೆಕ್ಕಿಗ ಹರೀಶ್ ಎಸ್. ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ.

ಕಂಡ್ಲೂರಿನಲ್ಲಿ ಹೋಂಸ್ಟೇ ನಿರ್ಮಾಣಕ್ಕೆ ಎನ್‌ಒಸಿ ಪಡೆಯಲು ಸುರೇಶ್ ನಾಯಕ್ ಅವರು ಅರ್ಜಿ ಸಲ್ಲಿಸಿದ್ದರು. ಈ ವೇಳೆ ಹರೀಶ್ ಅವರು ₹5,000 ಲಂಚಕ್ಕೆ ಬೇಡಿಕೆ ಇಟ್ಟು, ಗೂಗಲ್ ಪೇ ಮೂಲಕ ಹಣ ವರ್ಗಾಯಿಸುವಂತೆ ಸೂಚಿಸಿದ್ದರು ಎನ್ನಲಾಗಿದೆ. ಅದರಂತೆ ದೂರುದಾರರು ಹಣ ವರ್ಗಾಯಿಸಿದ್ದರು.

ಈ ಕುರಿತು ಸುರೇಶ್ ನಾಯಕ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು, ಹಣ ವರ್ಗಾವಣೆಯ ದಾಖಲೆಗಳು ಹಾಗೂ ಲಂಚಕ್ಕೆ ಬೇಡಿಕೆ ಇಟ್ಟಿದ್ದಕ್ಕೆ ಸಂಬಂಧಿಸಿದ ಫೋನ್ ಸಂಭಾಷಣೆಯ ಆಡಿಯೊವನ್ನು ಪರಿಶೀಲಿಸಿ, ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹರೀಶ್ ಅವರನ್ನು ಬಂಧಿಸಿದ್ದಾರೆ.

ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ. ದಿನೇಶ್ ಕುಮಾರ್ ಹಾಗೂ ಉಡುಪಿ ಡಿವೈಎಸ್‌ಪಿ ಹಾಲಮೂರ್ತಿ ರಾವ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು. ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಾಜೇಂದ್ರ ನಾಯಕ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

- Advertisement -

Latest News

error: Content is protected !!