Friday, October 16, 2026
Homeಅಪರಾಧವಿದ್ಯಾರ್ಥಿಯ ಮೇಲಿನ ಪೊಲೀಸ್ ಅಧಿಕಾರಿಯ ಹಲ್ಲೆ ಪ್ರಕರಣ: ಆಂತರಿಕ ತನಿಖೆಗೆ ಆದೇಶಿಸಿದ ಪೊಲೀಸ್ ಆಯುಕ್ತರ ನಡೆ...

ವಿದ್ಯಾರ್ಥಿಯ ಮೇಲಿನ ಪೊಲೀಸ್ ಅಧಿಕಾರಿಯ ಹಲ್ಲೆ ಪ್ರಕರಣ: ಆಂತರಿಕ ತನಿಖೆಗೆ ಆದೇಶಿಸಿದ ಪೊಲೀಸ್ ಆಯುಕ್ತರ ನಡೆ ಸ್ವಾಗತಿಸಿದ ಎಬಿವಿಪಿ

- Advertisement -
- Advertisement -

ಮಂಗಳೂರು: ನಗರದ ಸಂತ ಅಗ್ನೇಸ್ ಕಾಲೇಜಿನ ಮುಂಭಾಗದಲ್ಲಿ 12/10/2026ರಂದು ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಯ ಮೇಲೆ ಪೊಲೀಸ್ ಅಧಿಕಾರಿ ರವೀಶ್ ನಾಯಕ್ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ, ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

ಈ ಹಿನ್ನೆಲೆಯಲ್ಲಿ, ದಿನಾಂಕ 16/10/2026ರಂದು ಎಬಿವಿಪಿ ನಿಯೋಗವು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಭೇಟಿಯಾಗಿ, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು.

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಪೊಲೀಸ್ ಆಯುಕ್ತರು, ಸಂಬಂಧಿತ ಅಧಿಕಾರಿಯ ವಿರುದ್ಧ ಆಂತರಿಕ ತನಿಖೆಗೆ ಆದೇಶಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ವಿದ್ಯಾರ್ಥಿಗಳ ಆಕ್ರೋಶ ಮತ್ತು ಮನವಿಗೆ ಸ್ಪಂದಿಸಿ ಆಂತರಿಕ ತನಿಖೆಗೆ ಆದೇಶಿಸಿದ ಪೊಲೀಸ್ ಆಯುಕ್ತರ ಕ್ರಮವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸ್ವಾಗತಿಸುತ್ತದೆ. ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರೆಂದು ಸಾಬೀತಾದಲ್ಲಿ ಸಂಬಂಧಿತ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಎಬಿವಿಪಿ ಆಗ್ರಹಿಸಿದೆ.

- Advertisement -

Latest News

error: Content is protected !!