- Advertisement -
- Advertisement -
ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಉಸಿರಾಟದ ತೊಂದರೆಯಿಂದಾಗಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶುಕ್ರವಾರ ಸಂಜೆ ಸುಮಾರು 7.30ರ ವೇಳೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶ್ವಾಸಕೋಶ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 98 ವರ್ಷದ ಅಡ್ವಾಣಿ ಅವರ ಆರೋಗ್ಯದ ಮೇಲೆ ವೈದ್ಯರ ತಂಡ ನಿರಂತರ ನಿಗಾ ಇರಿಸಿದ್ದು, ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಇದಕ್ಕೂ ಮೊದಲು, ಈ ವರ್ಷದ ಮೇ ತಿಂಗಳಲ್ಲಿಯೂ ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಅಡ್ವಾಣಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನಗಳ ಚಿಕಿತ್ಸೆ ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಇದೀಗ ಮತ್ತೆ ಉಸಿರಾಟದ ಸಮಸ್ಯೆ ಹಾಗೂ ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
- Advertisement -


