- Advertisement -
- Advertisement -
ಮಂಗಳೂರು: ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವೆಲೆನ್ಸಿಯಾದ ಚರ್ಚ್ನ ಧರ್ಮಗುರು ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಬಂಧಿಕರೊಬ್ಬರ ಮನೆಯಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ.
ಧರ್ಮಗುರು ಸಿಪ್ರಿಯನ್ ಪಿಂಟೋ ವಿರುದ್ಧ ಸಂತ್ರಸ್ತರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇದೀಗ ಅವರನ್ನು ಬಂಧಿಸಿದ್ದಾರೆ.
- Advertisement -


