- Advertisement -
- Advertisement -
ಹೆಬ್ರಿ: ಉಡುಪಿಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಆಗುಂಬೆ ಘಾಟಿಯ ತಿರುವಿನಲ್ಲಿ ಸಿಲುಕಿಕೊಂಡ ಘಟನೆ ರವಿವಾರ (ಅ.18) ನಡೆದಿದೆ.
ತಿರುವು ಪಡೆಯಲು ಸಾಧ್ಯವಾಗದೆ ಬಸ್ ಸಿಲುಕಿಕೊಂಡಿದ್ದರಿಂದ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಬಳಿಕ ಬಸ್ಸನ್ನು ಹಿಮ್ಮುಖವಾಗಿ ಚಲಾಯಿಸಿ ಸ್ವಲ್ಪ ದೂರಕ್ಕೆ ಕೊಂಡೊಯ್ದು ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ರವಿವಾರ ರಜಾದಿನವಾಗಿದ್ದರಿಂದ ಘಾಟಿಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿತ್ತು. ಬಸ್ ಸಿಲುಕಿಕೊಂಡ ಪರಿಣಾಮ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿದ್ದರು.
ಘಾಟಿಯ ಕಡಿದಾದ ತಿರುವುಗಳಲ್ಲಿ ಬಸ್ ಚಲಾಯಿಸಲು ಚಾಲಕರಿಗೆ ಸೂಕ್ತ ಅನುಭವ ಇರಬೇಕು. ಇಂತಹ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕಡಿಮೆ ಉದ್ದದ ಬಸ್ಸುಗಳನ್ನು ನಿಯೋಜಿಸಬೇಕು ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ.
- Advertisement -


